ಮಳವಳ್ಳಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯ ಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಪಟ್ಟಣಕ್ಕೆ ಆಗಮಿಸುತ್ತಿ ರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ ಗುಪ್ತಚರ ಅಧಿಕಾರಿಗಳಾದ ವಿಶಾಲ್ ಅವರ ನೇತೃತ್ವದಲ್ಲಿ ಶನಿವಾರ ಸಾಯಂಕಾಲ 4.30 ರ ಸಮಯದಲ್ಲಿ ಜಿಲ್ಲಾಡಳಿತದ ಮತ್ತು ತಾಲೂಕು ಆಡಳಿತದಅದಿಕಾರಿಗ ಳೊಂದಿಗೆ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ರಾಷ್ಟ್ರಪತಿಗಳು ಬರುವ ಮುನ್ನ ಕೈಗೊಳ್ಳಬೇಕಾದ ಕಾನೂನು ಕ್ರಮಗಳು,ತುರ್ತು ಸೇವೆ, ಹೆಲಿಪ್ಯಾಡ್ ಮತ್ತು ವೇದಿಕೆ ಕಾರ್ಯಕ್ರಮದ ಭದ್ರತೆ ಕರ್ತವ್ಯ ಗಳ ಬಗ್ಗೆ ಅಗತ್ಯ ಸೂಚನೆ ನೀಡಿದರು.