ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಎಂ.ಜಿ. ರಸ್ತೆಯ ಪಿ.ಯು.ಬಿ. ಕಟ್ಟಡದ ಮಾನ್ಯ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ರವರ ಪುಣ್ಯ ಸ್ಮರಣೆ ದಿನದ ಕಾರ್ಯಕ್ರಮ ಅಂಗವಾಗಿ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಡಾ: ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಜಂಟಿ ಆಯುಕ್ತರುಗಳಾದ ರಂಗನಾಥ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.