ಸಿದ್ಧಾಪುರ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ವಶ
ಸಿದ್ದಾಪುರ : ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ ಸಂತೋಷ ಮತ್ತು ಕಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮೀ ನಾಯ್ಕ, ಜ್ಞಾನೇಶ ಮತ್ತು ವಿನಾಯಕ, ಸಿದ್ದಾಪುರ ಪಟ್ಟಣ ಪಂಚಾಯತ ಸಿಬ್ಬಂದಿಗಳೊಂದಿಗೆ ಹಠಾತ್ತನೆ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ನ ಮಾರಾಟವನ್ನು ತಡೆಗಟ್ಟಲು ಹೊಲ್ಸೇಲ್ ಅಂಗಡಿಗಳು, ಹೂ ಹಣ್ಣು ಅಂಗಡಿಗಳು, ಕಿರಾಣಿ ಅಂಗಡಿಗಳು, ಬೇಕರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಸುಮಾರು 48 ಕೆಜಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಒಟ್ಟು ರೂ. 1,900 ದಂಡವನ್ನು ಅಂಗಡಿ ಮಾಲೀಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಗುರುವಾರ ದಂಡ ವಿಧಿಸಲಾಯಿತು.