ಆಪರೇಷನ್ ಸಿಂಧೂರ ಬೆಂಬಲಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ರಾಷ್ಟ್ರ ರಕ್ಷಣೆಗಾಗಿ ನಾಗರೀಕರು ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ವತಿಯಿಂದ ಹಮ್ಮಿಕೊಂಡಿದ್ದ 100 ಮೀಟರ್ ಉದ್ದ ರಾಷ್ಟç ಧ್ವಜದ ತಿರಂಗ ಯಾತ್ರೆಯು ಮಂಗಳವಾರ ನ್ಯಾಮತಿ ಪಟ್ಟಣದ ಸುರಹೊನ್ನೇ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಂಚರಿಸಿತು.