ನಂಜನಗೂಡು: ಮೊಬ್ಬಳ್ಳಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಬೈಕ್ ಸವಾರನಿಗೆ ಗಂಭೀರ ಗಾಯ
ಜಮೀನಿನ ವೈಶಮ್ಯದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಬೊಲೆರೋ ವಾಹನದಲ್ಲಿ ಡಿಕ್ಕಿ ಹೊಡೆಸಿ ನಂತರ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಪ್ಪಸೋಗೆ ಗ್ರಾಮದ ಮಲ್ಲೇಶ್ ಈ ಕುರಿತು ಇಂದು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಮಾತನಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಜೈಲಿಗಟ್ಟಬೇಕಾದ ನಂಜನಗೂಡು ಗ್ರಾಮಾಂತರ ಪೊಲೀಸರು ಕೊಲೆಗಡುಕರ ಪರವಾಗಿ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.