ದಾವಣಗೆರೆ: ಬಸಾಪುರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು
ದಾವಣಗೆರೆ ನಗರದ ಬಸಾಪುರ ಗ್ರಾಮದಲ್ಲಿ ಬುಧವಾರ ಹೊಲದಲ್ಲಿ ಕೆಲಸ ಮಾಡುವ ವೇಳೆ ವ್ಯಕ್ತಿ ಓರ್ವನಿಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಬಸಾಪುರ ಗ್ರಾಮದ 40 ವರ್ಷದ ಶಿವು ಮೃತ ದುರ್ದೈವಿ. ಶಿವು ಹೊಲದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಗಲಿ ಮೃತಪಟ್ಟಿದ್ದಾರೆ. ಶವವನ್ನು ದಾವಣಗೆರೆ ನಗರದ ಚಿಗಟೇರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಶಾಸಕ ಕೆ.ಎಸ್.ಬಸವಂತಪ್ಪ ಆಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.