ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಪೊಲೀಸ್ ಠಾಣೆಗೆ ದೇಶದಲ್ಲಿ ಮೂರನೇ ಸ್ಥಾನ ಪಡೆದು ಅತ್ಯುತ್ತಮ ಪ್ರಶಸ್ತಿಗೆ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ. ಛತ್ತಿಸಗಡ್ ರಾಯಪುರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ಗೃಹ ಸಚಿವ ಅಮಿತ್ ಶಾ ಅವರಿಂದ ಅತ್ಯುತ್ತಮ ಪೊಲೀಸ್ ಠಾಣೆ ಎಂದು ಪ್ರಶಸ್ತಿ ಪಡೆದರು ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ ತಂದಂತ ಕವಿತಾಳ ಪೊಲೀಸ್ ಠಾಣೆಗೆ ಊರಿನ ಗ್ರಾಮಸ್ಥರು ಹರುಷ ವ್ಯಕ್ತಪಡಿಸಿದರು.