ಚಾಮರಾಜನಗರ: ವೀರನಪುರ ಗ್ರಾಮಸ್ಥರು ಎಸ್ಪಿ ಕಚೇರಿಗೆ ಮುತ್ತಿಗೆ ಎಚ್ಚರಿಕೆ ಹಿನ್ನೆಲೆ ಕಚೇರಿಗೆ ಬ್ಯಾರಿ ಕೇಟ್, ಪೊಲೀಸರಿಂದ ಬಂದೋಬಸ್ತ್
ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿಷೇಧ ಸಂಬಂಧ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲಾಗಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಆಕ್ರೋಶ ಹೊರಹಾಕಿದರು. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಖ್ಯ ಗೇಟ್ ನಲ್ಲಿ ಬ್ಯಾರಿ ಕೇಟ್ ಅಡ್ಡ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.