ಹೊಸನಗರ: ಗವಟೂರು ಗ್ರಾಮದಲ್ಲಿ ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು
ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ಮಂಗಳವಾರ ಸಂಜೆ 5 ಗಂಟೆಗೆ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು , ಯುವಕನನ್ನು ತೋಟದ ಮಾಲೀಕರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿ ಹೋಗಿದೆ. ಇದು ಕುಟುಂಬಸ್ಥರಲ್ಲಿ ಅನುಮಾನ ಮೂಡಿಸಿದೆ.