ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದಲ್ಲಿ ವಿಜೃಂಭಣೆಯಿಂದ ನಡೆದ ಶೂನ್ಯ ಪೀಠಾರೋಹಣ ಕಾರ್ಯಕ್ರಮ
ಚಿತ್ರದುರ್ಗದ ಮುರುಘಾ ಮಠದಲ್ಲಿ ಇಂದು ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಶೂನ್ಯ ಪೀಠಾರೋಹಣ ಮತ್ತು ಅಡ್ಡ ಪಲ್ಲಕ್ಕಿ ಉತ್ಸವ ಜರುಗಿತು. ಶ್ರೀ ಮುರಿಗಿ ಶಾಂತವೀರ ಮಹಾಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬಸವ ತತ್ವಗಳ ಗ್ರಂಥಗಳ ಮೆರವಣಿಗೆಯಲ್ಲಿ ಅನೇಕ ಮಠಾಧೀಶರು ಭಾಗವಹಿಸಿದ್ದರು.