ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘದಿಂದ ಕಾರ್ತಿಕ ದೀಪೋತ್ಸವ, ಸಾಧನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನ.17 ರಂದು ಸಂಜೆ 6.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಶ್ರೀ ಮದ್ರಂಭಾಪುರೀ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ವಹಿಸಲಿದ್ದಾರೆ. ನೇತೃತ್ವವನ್ನು ಸುಳ್ಳದ ಪಂಚಗೃಹ ಹಿರೇಮಠದ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಹು-ಧಾ ಮಹಾನಗರ ಪಾಲಿಕೆ ಮೇಯರ್ ಜ್