ಕಲಬುರಗಿ: ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ: ಹುತಾತ್ಮ ಪೊಲೀಸರಿಗೆ ನಮನ ಸಲ್ಲಿಸಿದ ಅಧಿಕಾರಿಗಳು
ಕಲಬುರಗಿ : ಕಲಬುರಗಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.. ಅಕ್ಟೋಬರ್ 21 ರಂದು ಬೆಳಗ್ಗೆ 9 ಗಂಟೆಗೆ ಡಿಎಆರ್ ಪೊಲೀಸ್ ಮೈದಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸರಿಗೆ ಗೌರವ ಹಾಗೂ ನಮನ ಸಲ್ಲಿಸಲಾಯಿತು.. ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್ಡಿ, ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು