ಹುಮ್ನಾಬಾದ್: ಪಟ್ಟಣದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ಪಟ್ಟಣದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ಸಂಘದ ವತಿಯಿಂದ ಶನಿವಾರ ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಭೀಮಣ್ಣ ದೇವಣಿ ಮಾತನಾಡಿದರು . ಈ ವೇಳೆ ಚಿಂತಕ ಶಿವಶಂಕರ್ ತರನಳ್ಳಿ, ಬಿಟಿವಿಪಿ ಪ್ರೌಢಶಾಲೆ ಮುಖ್ಯ ಶಿಕ್ಷಕ ವಿಜಯಕುಮಾರ್ ವಿಜಯಪುರಕರ್, ಕಾಶಿನಾಥ್ ಬಿರಾದರ್ ಮಾರ್ಗದರ್ಶನ ನೀಡಿದರು. ಸಂಘದ ಉಪಾಧ್ಯಕ್ಷ ಸುಭಾಷ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.