ಶಿವಮೊಗ್ಗ: ಹೊಸೂರಿನ ಮನೆಯೊಂದರಲ್ಲಿ ಗೋಡೆ ಕುಸಿತ ಹಾನಿಗೊಳಗಾದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಪರಿಶೀಲನೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸೂರಿನ ಮನೆಯೊಂದರಲ್ಲಿ ಗಾಳಿ ಮಳೆಯಿಂದಾಗಿ ಗೋಡೆ ಕುಸಿತದಿಂದ ಹಾನಿಗೊಳಗಾಗಿತ್ತು.ಮಂಗಳವಾರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.