ಮೈಸೂರು: ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್
Mysuru, Mysuru | Sep 29, 2025 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮೈಸೂರಿನಲ್ಲಿ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ನಗರದ ಗೋಕುಲಂ ಹಾಗೂ ಇತರೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಂಕುಮಾರ್ ಹಾಗೂ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಎಸ್.ಯುಕೇಶ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್ ಅವರು ಖುದ್ದಾಗಿ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.