ಬಾಗೇಪಲ್ಲಿ: ಆರ್ಯ ಈಡಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ 1ಎಕರೆ ಜಮೀನು ಮಂಜೂರು ಮಾಡುಸುತ್ತೇನೆ-ಪಟ್ಟಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಸರ್ಕಾರದಿಂದ ಆರ್ಯ ಈಡಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ ಒಂದು ಎಕರೆ ಜಮೀನು ಮಂಜೂರು ಮಾಡಿಸುವುದರ ಜೊತೆಗೆ ಉತ್ತಮ ಭವನ ನಿರ್ಮಾಣದ ಮತ್ತು ಒಂದು ಹಾಸ್ಟೆಲ್ ನಿರ್ಮಾಣ ಮಾಡಲು ನನ್ನ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.ಪಟ್ಟಣದ ಡಿ ವಿ ಜಿ ಮುಖ್ಯ ರಸ್ತೆಯಲ್ಲಿರುವ ದ್ವಾರಕ ಫಂಕ್ಷನ್ ಹಾಲ್ ನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಬಾಗೇಪಲ್ಲಿ ತಾಲ್ಲೂಕು ಆರ್ಯ ಈಡಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ 171 ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು