ಕೃಷ್ಣರಾಜನಗರ: ತಾಲ್ಲೂಕು ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯ ಪೂರ್ವಭಾವಿ ಸಭೆ
ಕೃಷ್ಣರಾಜನಗರ ತಾಲ್ಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ವಹಿಸಿ ಮಾತನಾಡಿ, ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಜಯಂತಿಯನ್ನು ಚುನಾವಣೆ ಇರುವುದರಿಂದ ಸರಳವಾಗಿ ಆಚರಿಸಲು ತಾಲ್ಲೂಕು ಆಡಳಿತದಿಂದ ತೀರ್ಮಾನ ಕೈಗೊಳ್ಳಲಾಗಿದ್ದು, ಸಮಾಜದ ಮುಖಂಡರು ಸಹಕರಿಸಬೇಕು. ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಿ ನಂತರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದರು.