ಶಿವಮೊಗ್ಗ: ಜುಲೈ 12ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಗರದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್ ಎಚ್ ಕೆ ಮಾಹಿತಿ
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನ ಸರಿಪಡಿಸುವಂತೆ ಆಗ್ರಹಿಸಿ ಜುಲೈ 21ರಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಬಿವಿಪಿಯ ದಕ್ಷಿಣ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಪ್ರವೀಣ್.ಹೆಚ್.ಕೆ ಹೇಳಿದರು. ಬುಧವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಸಮಸ್ಯೆಗಳು ಸಾಕಷ್ಟಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದುವರೆಗೆ ಬಸ್ ಪಾಸ್ ಸಿಕ್ಕಿಲ್ಲ. ಅಲ್ಲದೆ ಬಸ್‌ಗಳ ಸಂಖ್ಯೆಯು ಕಡಿಮೆ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಕೂಡಲೇ ಸರ್ಕಾರ ಇದನ್ನ ಸರಿಪಡಿಸಬೇಕು ಎಂದು ಹೇಳಿದರು.