ಶಿವಮೊಗ್ಗ: ಆಯನೂರು ಬಳಿ ಹಳ್ಳಕ್ಕೆ ಬಿದ್ದ ಕಾರು; ನಾಲ್ವರಿಗೆ ಗಾಯ
ಶಿವಮೊಗ್ಗ ತಾಲೂಕಿನ ಆಯನೂರು ಬಳಿಯ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ, ಕಾರದ್ದು ಹಳ್ಳಕ್ಕೆ ಬಿದ್ದಿರುವಾಗ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಚಿತ್ರದುರ್ಗದಿಂದ ಸಾಗರಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಓರ್ವ ಬಾಲಕ ಗಾಯಗೊಂಡಿದ್ದು,ಗಾಯಾಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.