ದೊಡ್ಡಬಳ್ಳಾಪುರ :ಪ್ರತೀ ವರ್ಷದಂತೆ ಸತತ ಆರನೇ ಭಾರಿಯೂ SSLC ಮತ್ತು PUCಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ಕ್ಷೇತ್ರ ಶಾಸಕ ಧೀರಜ್ ಮುನಿರಾಜ್ ಅವರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿರುವ ಸ್ವಗೃಹ ಬಳಿ ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ 700 ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ನಗದು ಬಹುಮಾನ ನೀಡಿ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದ್ದಾರೆ. ಈ ವರ್ಷದಿಂದ ನೂತನವಾಗಿ ಮೆಡಿಕಲ್ ವ್ಯಾಸಂಗ ಮಾಡುವ ಹತ್ತು ಮಂದಿ ಬಡ ಮೆಡಿಕಲ್ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ ಧೀರಜ್ ಮುನಿರಾಜ್ ಅವರು ಘ