ರಾಯಚೂರು ಸಿಪಿಐ(ಎಂ) ರಾಜ್ಯ ಸಮಿತಿಯ ವತಿಯಿಂದ ಪರ್ಯಾಯ ರಾಜಕಾರಣಕ್ಕಾಗಿ ಜನದನಿ ರ್ಯಾಲಿ ಎಂಬ ಬೃಹತ್ ಪ್ರತಿಭಟನಾ ಬಹಿರಂಗ ಸಭೆಯನ್ನು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ ವೀರೇಶ್ ಶನಿವಾರ 11 ಗಂಟೆಗೆ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡುತ್ತಾ, ಈ ರ್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 30 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಇದಕ್ಕೆ ಪೂರ್ವಭಾವಿಯಾಗಿ, ನವೆಂಬರ್ 1ರಿಂದ ಡಿಸೆಂಬರ್ 15ರವರೆಗೆ ಸಿಪಿಐಎಂ ಪಕ್ಷದ ಶಾಖೆಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಮನೆ ಮನೆ ಭೇಟಿ ಅಭಿಯಾನ ಮಾಡಲಾಗುತ್ತದೆ ಎಂದರು.