ಕೋಗಿಲು ಲೇಔಟ್ ಬಳಿ ಕಾಂಗ್ರೆಸ್ ಸರ್ಕಾರ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಿದ ಹಿನ್ನೆಲೆಯಲ್ಲಿ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಚಾಲವಾಡಿ ನಾರಾಯಣಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ತಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.