ಚಿಕ್ಕೋಡಿ: ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣ ಪಟ್ಟಣದಲ್ಲಿ ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ
ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣ ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಹೊಟ್ಟೆನೋವು, ವಾಂತಿಯಿಂದ ಅಸ್ವಸ್ತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 16 ಮಕ್ಕಳನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿಯಾಗಿ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಕ್ಕಳು ಸಂಪೂರ್ಣ ಗುಣಮುಖರಾಗುವರೆಗೆ ಚಿಕಿತ್ಸೆ ಮುಂದುವರೆಸಬೇಕು ಎಂದು ವೈದ್ಯರಿಗೆ ತಿಳಿಹೇಳಿದರು.