ಹಳಿಯಾಳ: ದುರ್ಗಾ ನಗರದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆ
ಹಳಿಯಾಳ : 2022–23ನೇ ಸಾಲಿನ ವಿವಿಧ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿ, ಮುಖ್ಯಮಂತ್ರಿ ಅವರ ವಿಶೇಷ ಅನುದಾನದಿಂದ ಮಂಜೂರಾದ ಹಳಿಯಾಳ ಪಟ್ಟಣದ ದುರ್ಗಾ ನಗರದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದ ಕಾಮಗಾರಿಗೆ ಗುರುವಾರ ಮಧ್ಯಾಹ್ನ 01 ಗಂಟೆ ಸುಮಾರಿಗೆ ಶಾಸಕ ಆರ್.ವಿ.ದೇಶಪಾಂಡೆಯವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ಈ ಸಮುದಾಯ ಭವನ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳಿಗೆ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಕೇಂದ್ರವಾಗುವಂತ ಸ್ಥಳ ದೊರೆಯಲಿದೆ ಎಂದರು.