ಹೊಸಕೋಟೆ: ಪಟ್ಟಣದ ತಾಲ್ಲೂಕಾಡಳಿತ ಸೌಧದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಭಾಗಿ
ಹೊಸಕೋಟೆ: ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ. ಹೊಸಕೋಟೆ ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನೆರವೇರಿದ ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತ್ಯುತ್ಸವದಲ್ಲಿ ಗಣ್ಯರು ಹಾಗೂ ಸಮುದಾಯದ ಮುಖಂಡರೊಂದಿಗೆ ಭಾಗವಹಿಸಿ, ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ, ತಾಲ್ಲೂಕಿನಲ್ಲಿ ವೀರಶೈವ ಭವನ ನಿರ್ಮಿಸಿಕೊಡುವಂತೆ ಸಮುದಾಯದ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಲಾಯಿತು. ನಂತರ, ಜಗಜ್ಯೋತಿ ಶ್ರೀ ಬಸವಣ್ಣನವರ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರೊಂದಿಗೆ ಮಾಲಾರ್ಪಣೆ ಮಾಡಲಾಯಿತು.