ಆಳಂದ: ಲೋಕಸಭೆ ಚುನಾವಣಾ ಮಾದರಿ ನೀತಿಸಂಹಿತೆ ಜಾರಿ, ಪಟ್ಟಣದಲ್ಲಿ ರಾಜಕೀಯ ಪ್ರಚಾರದ ಬ್ಯಾನರ್, ಫ್ಲೆಕ್ಸ್ ತೆರವು
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಮಾದರಿ ನೀತಿಸಂಹಿತೆ ಜಾರಿಗೆ ಬಂದಿರುವುದರಿಂದ ಆಳಂದ ಪಟ್ಟಣದಲ್ಲಿ ಶನಿವಾರ ರಾಜಕೀಯ ಪ್ರಚಾರದ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು. ಜಿಲ್ಲಾ ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಪುರಸಭೆ ಸಿಬ್ಬಂದಿ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ ಎಲ್ಲಾ ರೀತಿಯ ಪ್ರಚಾರ ಫಲಕ, ಗೋಡೆ ಬರಹಗಳನ್ನು ತೆರವುಗೊಳಿಸಿದರು. ತಾಲ್ಲೂಕು ಪಂಚಾಯಿತಿ, ತಹಶೀಲ್ದಾರ್ ಕಚೇರಿ, ಪ್ರವಾಸಿ ಮಂದಿರ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ಆವರಣ ಹಾಗೂ ಹೊರಭಾಗದಲ್ಲಿ ಅಳವಡಿಸಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಫ್ಲೆಕ್ಸ್‌ಗಳನ್ನೂ ತೆರವುಗೊಳಿಸಲಾಯಿತು.