ಬ್ಯಾಡಗಿ: ಸರ್ಕಾರಿ ಆದೇಶ ಉಲ್ಲಂಘಿಸಿ ಡಿಜೆ ಹಚ್ಚಿದ ಆರೋಪ; ಬ್ಯಾಡಗಿಯಲ್ಲಿ ಹಿಂದೂ ಮಹಾಸಭಾ ಗಣಪತಿ ಮಂಡಳಿ ವಿರುದ್ಧ ಎಫ್ಐಆರ್
Byadgi, Haveri | Sep 28, 2025 ಸಾರ್ವಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಬಳಕೆ ಮಾಡದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದ ಆದೇಶವಿದ್ದರೂ ಆದೇಶವನ್ನು ಉಲ್ಲಂಘಿಸಿ ಡಿಜೆ ಹಚ್ಚಿ ಮೆರವಣಿಗೆ ಮಾಡಲಾಗಿದೆ. ಸಾರ್ವಜನಿಕರಿಗೆ ಅಶಾಂತಿ ಉಂಟು ಮಾಡಿದೆ ಎಂದು ಆರೋಪಿಸಿ ಬ್ಯಾಡಗಿ ತಹಶೀಲ್ದಾರ್ ಚಂದ್ರಶೇಖರ್ ಗಣಪತಿ ಮಂಡಳಿಯ 5 ಜನ, ಇಬ್ಬರು ಡಿಜೆ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ..