ಅಂಕೋಲಾ: ಕಾರ್ಮಿಕರಿಗೆ ರಕ್ಷಣೆ ನೀಡುವ 29 ಕಾನೂನು ರದ್ದು ಮಾಡಿ ಬಂಡವಾಳಶಾಹಿ ಪರವಾದ 4 ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಜಾರಿಗೊಳಿಸಿ ಗೆಜೆಟ್ ಪ್ರಕಟಣೆ ಹೋರಡಿಸಿರುವುದನ್ನು ಖಂಡಿಸಿ ಅಂಕೋಲಾ ಪಟ್ಟಣದಲ್ಲಿ ರೈತರು ಮತ್ತು ಕಾರ್ಮಿಕರ ಹೋರಾಟದ ಭಾಗವಾಗಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಗೆಜೆಟ್ ಪ್ರತಿ ಸುಟ್ಟು ಪ್ರತಿಭಟಿಸಲಾಯಿತು. ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಸಿಐಟಿಯು ತಾಲೂಕು ಸಮಿತಿಗಳು ಸಂಘಟಿಸಿದ ಹೋರಾಟದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ಸಿಐಟಿಯು ತಾಲೂಕು ಸಂಚಾಲಕ ಎಚ್.ಬಿ.ನಾಯಕ, ರೈತ ಸಂಘದ ತಾಲೂಕು ಅಧ್ಯಕ್ಷ ಗೌರೀಶ ನಾಯಕ , ಕಾರ್ಯದರ್ಶಿ ಸಂತೋಷ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.