ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಪಟ್ಟಣದ ಅಬಕಾರಿ ಇಲಾಖೆ ಆವರಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ತಾಲೂಕಿನ ಬಿ.ಜಿ.ಕೆರೆ ವಸುಂಧರ ಕೃಷಿ ಕ್ಷೇತ್ರದಲ್ಲಿ ಎಸ್.ಸಿ.ವೀರಭದಪ್ಪ ಅವರು ತೆಂಗಿನ ಮರದಿಂದ ನೀರಾ(ಕಲ್ಲರಸ) ಇಳಿಸಿ ಮಾರಾಟ ಮಾಡುತ್ತಿದ್ದಾರೆ. ಈ ಸ್ಥಳಕ್ಕೆ ಇತ್ತೀಚಿಗೆ ತೆರಳಿದ್ದ ಅಬಕಾರಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಬೆದರಿಕ ಹಾಕುತ್ತಾ ನೀರಾ ಇಳಿಸುವುದನ್ನು ನಿಲ್ಲಿಸುವಂತೆ ತಾಕೀತು ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರು.