ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ಇತ್ತೀಚೆಗೆ ಹತ್ಯೆ ಯಾದ ಹಿಂದೂ ಮಹಿಳೆ ರಂಜಿತಾ ಬನ್ಸೋಡೆ ಮನೆಗೆ ಬಿಜೆಪಿಯ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಸಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ರಂಜಿತಾ ಕುಟುಂಬದ ದುಃಖದಲ್ಲಿ ನಾವೆಲ್ಲ ಜೊತೆಗಿರುತ್ತೇವೆ ಎಂದು ಧೈರ್ಯ ತುಂಬಿದ ಅವರು,ಮೃತ ಮಹಿಳೆಯ ಮಗನಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸುವಂತೆ ಕುಟುಂಬಕ್ಕೆ ತಿಳಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವದನ್ನು ಇದನ್ನು ಬಲವಾಗಿ ಖಂಡಿಸುತ್ತೇನೆ ಎಂದರು.