ರಾಯಚೂರು: ಜಿಲ್ಲೆಯ ನೂತನ ನ್ಯಾಯಾಲಯಕ್ಕೆ ಅನುದಾನ ಬಿಡುಗಡೆ ಮಾಡಲು ಸಚಿವರುಗಳಿಗೆ ವಕೀಲರ ಸಂಘದ ಮನವಿ
ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರನ್ನು ಭೇಟಿ ಮಾಡಿ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡಕ್ಕೆ ಅನುದಾನ ನೀಡಲು ಸೆ.26 ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಒತ್ತಾಯಿಸಲಾಯಿತು. ಬೆಂಗಳೂರಿನಲ್ಲಿ ಭೇಟಿಯಾಗಿ ಬೇಡಿಕೆ ಸಲ್ಲಿಸುವ ವೇಳೆ ವಿಧಾನ ಪರಿಷತ್ ಸದಸ್ಯ ಎ.ವಸಂತ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ಅವರನ್ನು ಸಹ ಭೇಟಿಯಾಗಿ ನೂತನ ರಾಯಚೂರು ಜಿಲ್ಲಾ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಮತ್ತು ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.