ರಾಯಚೂರು: ರಾಯಚೂರು : ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರ ಮೆರವಣಿಗೆ
ಅಕ್ಟೋಬರ್ 23 ರಂದು ಗುರುವಾರ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಯುಂಕ್ತಾಶ್ರಯದಲ್ಲಿ ಕಿತ್ತೂರ್ ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ಇನ್ನು ಜಯಂತಿ ಅಂಗವಾಗಿ ರಾಯಚೂರು ನಗರದ ಅಂಬೇಡ್ಕರ್ ವೃತ್ತದಿಂದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು. ಈ ವೇಳೆ ಅಧಿಕಾರಿಗಳು, ಸಿಬ್ಬಂದಿಗಳು ವಿವಿಧ ಸಮುದಾಯಗಳ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.