ಲಕ್ಷ್ಮೇಶ್ವರ: ಫಸಲ್ ಭೀಮಾ ಯೋಜನೆಯಲ್ಲಿ ಅವ್ಯವಹಾರ ಆರೋಪ, ಪಟ್ಟಣದಲ್ಲಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸಂಘ ಪ್ರತಿಭಟನೆ#locelissue
ಫಸಲ್‍ಭಿಮಾ ಯೋಜನೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದೆ. ಅಲ್ಲದೆ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಅಧ್ಯಕ್ಷ ನಾಗೇಶ ಅಮರಾಪುರ ಅವರ ನೇತೃತ್ವದಲ್ಲಿ ಕಾರ್ಯಕರ್ತರು ತಹಶೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಅತಿವೃಷ್ಟಿ, ಅನಾವೃಷ್ಟಿಯಂತ ಸಂದರ್ಭಗಳಲ್ಲಿ ರೈತರ ಕೈ ಹಿಡಿಯಬೇಕಾಗಿದ್ದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಂಪೂರ್ಣ ಏಜೆಂಟರ ಕೈಯಲ್ಲಿದೆ. ಶೇ50ಕ್ಕಿಂತ ಹೆಚ್ಚು ಬೆಳೆ ನಷ್ಟಕ್ಕೆ ಪರಿಹಾರ ಪಾವತಿಸಬೇಕಿದೆ. ಆದರೆ ಪರಿಹಾರ ನೀಡುವಲ್ಲಿ ಕೃಷಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ವಿಮೆ ಕಂಪನಿಗಳ ಪರವಾಗಿ ಕೆಲಸ ಮಾಡುತ್ತದೆ.