ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರವರ ನೇತೃತ್ವದಲ್ಲಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜೂನ್ 2026ರೊಳಗೆ ಬೃಹತ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಡೆಯಲಿರುವ ಐದು ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದ ಪೂರ್ವಭಾವಿ ಸಿದ್ಧತೆಗಳು ಹಾಗೂ ಪಕ್ಷದ ಸಂಘಟನಾತ್ಮಕ ಬಲವರ್ಧನೆ ಕುರಿತು ಗಂಭೀರ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕೋರ್ ಕಮಿಟಿ ಅಧ್ಯಕ್ಷರು ಮತ್ತು ಸದಸ್ಯರು, ಶಾಸಕರು, ಮಾಜಿ ಶಾಸಕರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಉಸ್ತುವಾರಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಬೆಂಗಳೂರು ನಗ