ಕಾರವಾರ: ವಿವಿಧ ಬೇಡಿಕೆ ಪೂರೈಸುವಂತೆ ಆಗ್ರಹಿಸಿ ಪಿ.ಯು. ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರಿಂದ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ
ಶಿಕ್ಷಣ ಇಲಾಖೆಯ (ಪದವಿಪೂರ್ವ) ಕಾಲೇಜುಗಳಿಗೆ ಸಂಬಂಧಿಸಿದಂತೆ ಇಲಾಖೆಯು ಹೊರಡಿಸುತ್ತಿರುವ ಅವೈಜ್ಞಾನಿಕ ಆದೇಶಗಳು ಪದವಿಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ಅಸ್ಥಿರಗೊಳಿಸುತ್ತಿವೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ (ಪದವಿ ಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಂಟಿಯಾಗಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರ ಮೂಲಕ ಶುಕ್ರವಾರ ಮಧ್ಯಾಹ್ನ 1ಕ್ಕೆ ಮನವಿ ಮಾಡಲಾಗಿದೆ.