ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿ: ಕಳಲೆ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಕರೆ
ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಕರೆ ನೀಡಿದರು ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಗೇಟ್ ನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಆರ್ ಧ್ರುವನಾರಾಯಣ್ ಅವರು ನಂಬರ್ ಒನ್ ಸಂಸದರಾಗಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಈ ಭಾಗದಲ್ಲಿ ಕೃಷಿ ಚಟುವಟಿಕೆಗೆ ಮಾಜಿ ಸಚಿವ ದಿವಂಗತ ಮಹದೇವ ಪ್ರಸಾದ್ ಅವರು ಕಾರಣ. ಸರ್ಕಾರದ ಐದು ಗ್ಯಾರಂಟಿಗಳು ಯಶಸ್ವಿಯಾಗಿದೆ. ನುಡಿದಂತೆ ನಡೆದ ಸರ್ಕಾರ ಎಂದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.