ಕಮಲಾಪುರ: ಧಾರಕಾರ ಮಳೆ: ಡೊಂಗರಗಾಂವ್, ಕಿಣ್ಣಿಸಡಕ್ ಗ್ರಾಮದ ಮನೆಗಳಿಗೆ ನುಗ್ಗಿದ ನೀರು
ಕಲಬುರಗಿ : ಕಳೆದ ರಾತ್ರಿ ಸುರಿದ ಧಾರಕಾರ ಮಳೆಗೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಕಿಣ್ಣಿಸಡಕ್ ಮತ್ತು ಡೊಂಗರವಾಂವ್ ಗ್ರಾಮಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.. ಸೆ15 ರಂದು ಬೆಳಗ್ಗೆ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ನಿರಂತರ ಮಳೆಯಿಂದಾಗಿ ಸುತ್ತಮುತ್ತಲಿನ ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ಎರಡು ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿ ದವಸಧಾನ್ಯಗಳು, ಬಟ್ಟೆ, ಸೇರಿದಂತೆ ಇನ್ನಿತರ ವಸ್ತುಗಳು ನೀರು ಪಾಲಾಗಿವೆ.. ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ಪರಿಹಾರ ನೀಡಬೇಕೆಂದು ಎರಡು ಗ್ರಾಮಸ್ಥರು ಆಗ್ರಹಿಸಿದ್ದಾರೆ.