ಮಳವಳ್ಳಿ : ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿ ಗಳನ್ನು ತೆರವುಗೊಳಿಸಿರುವ ಪೊಲೀಸರ ಕ್ರಮ ವಿರೋಧಿಸಿ ಪಟ್ಟಣದ ಪುರಸಭೆ ಮುಂದೆ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ವೃತ್ತದ ಬಳಿ ನಡೆಯುತ್ತಿರುವ ಪುಟ್ ಪಾತ್ ಮೇಲಿನ ವ್ಯಾಪಾರ ದಿಂದ ವಾಹನ ಹಾಗೂ ಜನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂಬ ಕಾರಣಕ್ಕೆ ಸೋಮವಾರ ರಸ್ತೆಗೆ ಇಳಿದ ಪಟ್ಟಣದ ಪ್ರಭಾರೆ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಸಿಬ್ಬಂದಿ ವ್ಯಾಪಾರಿಗಳನ್ನು ತೆರವು ಗೊಳಿಸಿದ್ದರು. ಸೋಮವಾರ ಮಧ್ಯಾಹ್ನ 1.30 ರ ಸಮಯದಲ್ಲಿ ನೆರೆದ ವ್ಯಾಪಾರಿ ಗಳು ಪುರಸಭಾ ಕಚೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು ಈ ವೇಳೆ ಪುರಸಭೆಯ ಅಧಿಕಾರಿಗಳು ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.