ಶಿವಮೊಗ್ಗ: ಕಾಂತರಾಜ್ ವರದಿ ಜಾರಿಗೆ ನಗರದಲ್ಲಿ ಹಿಂದುಳಿದ ಜಾಗೃತಿ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ಆಗ್ರಹ
ಕಾಂತರಾಜ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಅಧಿವೇಶನದಲ್ಲಿ ಘೋಷಣೆ ಮಾಡಬೇಕು ಎಂದು ಹಿಂದುಳಿದ ಜಾಗೃತಿ ವೇದಿಕೆ, ಅಖಿಲ ಕರ್ನಾಟಕ ಹಿಂದುಳಿದ ವರ್ಗಗಳು,ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ತೀ.ನ.ಶ್ರೀನಿವಾಸ್ ಅವರು ಬಿಜೆಪಿ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಲು ಮೀನಾ ಮೇಷ ಎಣಿಸುತ್ತಿದೆ.ಹಲವು ವರ್ಷಗಳಿಂದ ಕಾಂತರಾಜ್ ಆಯೋಗದ ವರದಿ ಜಾರಿಗಾಗಿ ಹಿಂದುಳಿದ ವರ್ಗಗಳು ಪ್ರತಿಭಟನೆ ಮಾಡುತ್ತಲೇ ಬಂದಿದೆ. ಸರ್ಕಾರ ಕೂಡಲೇ ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದರು.