ನಂಜನಗೂಡು: ಬೇಸಿಗೆ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟವನ್ನು ಬೇಸಿಗೆ ರಜೆಯಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುತ್ತದೆ ಎಂದು ದೈಹಿಕ ಪರಿವೀಕ್ಷಕ ಹಾಗೂ ನೋಡಲ್ ಅಧಿಕಾರಿ ಶಿವಕುಮಾರ್ ಹೇಳಿದರು. ನಂಜನಗೂಡು ನಗರದ ಹಳ್ಳದ ಕೇರಿ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೇಸಿಗೆ ರಜೆ ಬಿಸಿಯೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ 223 ತಾಲೂಕುಗಳಲ್ಲಿ ಬರಪೀಡಿತ ಪ್ರದೇಶವಾಗಿರುವ ಎಲ್ಲ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಬಿಸಿ ಊಟವನ್ನು ನೀಡಬೇಕು ಎಂದು ಆದೇಶ ನೀಡಲಾಗಿದೆ. ಅದರಂತೆ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಮಕ್ಕಳಿಗೆ ಎಂದಿನಂತೆ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.