ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಓಕಳಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಗುರುಗಳಾದ ಗುರುಬಸಪ್ಪ ರಕ್ಕಸಗಿ ಮಾತನಾಡಿ, ಸ್ವಾಮಿ ವಿವೇಕಾನಂದರು ಸಾಗಿಬಂದ ಮಾರ್ಗಗಳನ್ನು ವಿವರಿಸಿದರು. ಉತ್ತಮ ಭಾಷಣ ಮಾಡಿದ ಮಕ್ಕಳಿಗೆ ಸ್ಕೂಪ್ಸ್ ಕಮಲಾಪುರ ಅಧ್ಯಕ್ಷೆ ವಿಶಾಲಾಕ್ಷಿ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ನೂತನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಧುಮಾಲತಿ ದೋಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಪಿಲಗೌಡ ಪೊಲೀಸ್ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು ಎಂದು ಸೋಮವಾರ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ.