ಹೊಸಪೇಟೆ: ಹೊಸಪೇಟೆಯಲ್ಲಿ ಕಾರು-ಬೈಕ್ ಅಪಘಾತ, ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು
ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಮ್ಮ, ಜ್ಯೋತಿ ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.