ಹುಬ್ಬಳ್ಳಿ: ಇಲ್ಲಿಯ ಗೋಪನಕೊಪ್ಪ-ಸುಳ್ಳ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಐವರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ಖಾದಿರ್, ಮನೋಜಕುಮಾರ, ಉಮರ್, ವಿಕ್ರಾಂತಕುಮಾರ ಹಾಗೂ ಅಜರ್ಖಾಜಿ ಬಂಧಿತರು. ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ 100 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.