ಕಾರವಾರ: ಲೋಕ್ ಅದಾಲತ್ ಮೂಲಕ 6000 ಪ್ರಕರಣ ಇತ್ಯರ್ಥ ಗುರಿ: ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾ.ಮಾಯಣ್ಣ ಬಿ.ಎಲ್.
ಶನಿವಾರ ಮಧ್ಯಾಹ್ನ 12ಕ್ಕೆ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಾಯಣ್ಣ ಬಿ.ಎಲ್ ಜಿಲ್ಲೆಯಲ್ಲಿ ಡಿಸೆಂಬರ್ 13 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 6000 ಸಂಖ್ಯೆಯ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ವಿವಿಧ ಹಂತದ ನ್ಯಾಯಾಲಯಗಳಲ್ಲಿ 39,766 ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ 6000 ಪ್ರಕರಣಗಳನ್ನು ಪಕ್ಷಗಾರರಿಗೆ ಹೊರೆಯಾಗದಂತೆ ಲೋಕ ಅದಾಲತ್ ಮೂಲಕ ಶೀಘ್ರವಾಗಿ ಇತ್ಯರ್ಥ ಮಾಡುವ ಗುರಿ ಹೊಂದಲಾಗಿದ್ದು, ಕಳೆದ ಬಾರಿ ನಡೆದ ಲೋಕ್ ಅದಾಲತ್ನಲ್ಲಿ 5202 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ