ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯು ಅರ್ಥಪೂರ್ಣವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ 12 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 2026ರ ಜನವರಿ 3ರ ಬೆಳಗ್ಗೆ 11:30ಕ್ಕೆ ದಿನಾಚರಣೆ ನಿಗದಿಯಾಗಿದೆ. ಅಂದು 9 ಗಂಟೆಗೆ ನಗರದ ಬೇರೂನ್ ಕಿಲ್ಲಾದ ಶ್ರೀ ಕಾಳಿಕಾದೇವಿ ದೇವಸ್ಥಾನದಿಂದ ರಂಗಮಂದಿರದವರೆಗೂ ಮೆರವಣಿಗೆ ನಡೆಯಲಿದೆ ಎಂದರು.