ಶಿಡ್ಲಘಟ್ಟ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆ
ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಸರ್ ಎಂ.ವಿಶ್ವೇಶ್ವರಯ್ಯ ಅವರ ಜೀವನ ಇಂದು ಪ್ರತಿಯೊಬ್ಬರಿಗೂ ಮಾದರಿಯಾಗಿದೆ.ಅವರ ಸಮಯ ಪ್ರಜ್ಞೆ,ಸಮಯ ಪಾಲನೆ,ನಿಷ್ಠೆ ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ನೀಡಿದ ಮಹತ್ವ ಎಲ್ಲರಿಗೂ ಮಾದರಿ. ಅವರು ತೋರಿಸಿದ ಶಿಸ್ತು, ತ್ಯಾಗ ಹಾಗೂ ಪರಿಶ್ರಮದಿಂದಲೇ ಭಾರತದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಹೊಸ ಚರಿತ್ರೆ ಬರೆಯಲಾಗಿದೆ.ಇಂತಹ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದುವುದರ ಮೂಲಕ ವಿದ್ಯಾರ್ಥಿಗಳು ಮತ್ತು ಯುವ ಪೀಳಿಗೆ ಶ್ರದ್ಧೆ,ನೈತಿಕತೆ ಹಾಗೂ ಕಠಿಣ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬಹುದೆಂಬ ಪ್ರೇರಣೆಯನ್ನು ಪಡೆಯಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹೇಳಿದರು