ಬಂಗಾರಪೇಟೆ: ಸ್ಮಶಾನಜಾಗ ಒತ್ತುವರಿ ತೆರವುಗೊಳಿಸುವಂತೆ ಬೆಂಗನೂರು ಗ್ರಾಮದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ
ಸ್ಮಶಾನಜಾಗವನ್ನು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಸರ್ವೆ ಮಾಡಿ ತೆರವುಗೊಳಿಸುವಂತೆ ಒತ್ತಾಯಿಸಿ ದಲಿತ ಸಮಾಜ ಸೇನೆ ಕಾರ್ಯಕರ್ತರು ಗ್ರಾಮಸ್ಥರೊಂದಿಗೆ ಸೇರಿ ಸ್ಮಶಾನದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ದಲಿತ ಸಮಾಜ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ ತಾಲೂಕಿನ ಬೆಂಗನೂರು ಗ್ರಾಮದ ಸರ್ವೆ ನಂ.೧೯ರಲ್ಲಿ ಸ್ಮಶಾನಕ್ಕೆಂದು ೪.೩ಗುಂಟೆ ಮೀಸಲಿಟ್ಟಿದ್ದು, ಆಜಾಗವನ್ನುಗ್ರಾಮದ ಕೆಲವು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಸಮಸ್ಯೆ ಉಂಟಾಗಿದ್ದು ತಾಲೂಕು ಆಡಳಿತ ವರ್ಗ ಒತ್ತುವರಿಯನ್ನು ಸರ್ವೆ ಮಾಡಿ ತೆರವುಗೊಳಿಸಬೇಕೆಂದು ಆಗ್ರಹಿಸಿ