ಚಳ್ಳಕೆರೆ: ನಗರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕ ಜಾರಿಗೆ ಹೋರಾಟದ ಪೂರ್ವಭಾವಿ ಸಭೆ
ಚಳ್ಳಕೆರೆ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ಎಂದರು.