ಶಿವಮೊಗ್ಗ: ನಗರದ ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ
ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಏಳೆಂಟು ಅಂಗಡಿಗಳಿಗೆ ಬೆಂಕಿ ಹೊತ್ತುಕೊಂಡಿದೆ ಎನ್ನಲಾಗಿದ್ದು, ಒಳಗಿದ್ದ ವಸ್ತುಗಳು ಆಹುತಿಯಾಗಿವೆ. ಇನ್ನು, ದಟ್ಟ ಹೊಗೆ ಆವರಿಸಿದ್ದರು ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಅಂಗಡಿಗಳಿಗೆ ಸೋಮವಾರ ರಾತ್ರಿ ಬೆಂಕಿ ಹೊತ್ತುಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಆದರೆ ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿತ್ತು. ಬಳಿಕ ಅಧಿಶಾಮಕದಳಾದ ಸಿಬ್ಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ