ಕಲಬುರಗಿ ನಗರದಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ. ಆಹಾರ ನಿರೀಕ್ಷಕರಾದ ಅರ್ಚನಾ, ಸಬ್ ಅರ್ಬನ್ ಉಪ ವಿಭಾಗದ ಎಸಿಪಿ ಬಸವೇಶ್ವರ ಹಾಗೂ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ. 5 ಲಕ್ಷ ರೂ.ಮೌಲ್ಯದ ಲಾರಿ ಮತ್ತು ಅಕ್ಕಿ ಸೇರಿ ಒಟ್ಟು 1.35 ಕೋಟಿ ರೂ. ಮೌಲ್ಯದ ಸ್ವತ್ತನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಯಾದಗಿರಿಯಿಂದ ಮಹಾರಾಷ್ಟ್ರ ಮತ್ತು ಗುಜರಾತಗೆ ಸಾಗಾಟ ನಡೆದಿತ್ತು ಎಂದು ತಿಳಿದುಬಂದಿದೆ. ಸದ್ಯ ಈ ಕುರಿತು ಲಾರಿ ಚಾಲಕ, ಲಾರಿ ಮಾಲಿಕನ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಬುಧವಾರ 8 ಗಂಟೆಗೆ